ಬೆಂಗಳೂರು: ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾರ ರಾಜ್ಯದ ಸಾರಿಗೆ ನೌಕರರಿಗೆ ಬಿಗ್ ಶಾಕ್ ಎದುರಾಗಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಲಾಗಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದು, ಸಾರಿಗೆ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.
ಇನ್ನು ಮುಷ್ಕರಕ್ಕೆ ಮುಂದಾದ ರಾಜ್ಯದ ಸಾರಿಗೆ ನೌಕರರಿಗೆ ಬಿಗ್ ಶಾಕ್ ಎದುರಾಗಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಲಾಗಿದೆ. ಅಗತ್ಯಬಿದ್ದರೆ ವೀಕ್ಲೀ ಆಫ್ ಕೂಡ ರದ್ದು ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇನ್ನು ನಾಳೆಯಿಂದ ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.





