ಮೈಸೂರು- ಎಚ್.ಡಿ.ಕೋಟೆ ಮಾರ್ಗದಲ್ಲಿ ಸಿಗುವ ಕಂಚಮಳ್ಳಿ ಗೇಟ್ ಬಳಿಯ ಬಸ್ ತಂಗುದಾಣ ಶಿಥಿಲವಾಗಿದ್ದು, ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ಸಮೀಪದಲ್ಲೇ ಇರುವ ಶನಿದೇವರ ದೇವಸ್ಥಾನಕ್ಕೆ ಪ್ರತಿನಿತ್ಯ ನೂರಾರು ಜನರು ಆಗಮಿಸುತ್ತಾರೆ. ತಂಗುದಾಣ ಶಿಥಿಲಗೊಂಡಿರುವುದರಿಂದ ಬಿಸಿಲು, ಮಳೆಯಲ್ಲೇ ನಿಂತು ಬಸ್ಸಿಗಾಗಿ ಕಾಯಬೇಕಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹೊಸದಾಗಿ ಬಸ್ ತಂಗುದಾಣ ನಿರ್ಮಿಸುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ





