Mysore
29
overcast clouds

Social Media

ಶನಿವಾರ, 13 ಜೂನ್ 2026
Light
Dark

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ರಿಲ್ಯಾಕ್ಸ್‌ ಮೂಡ್‌ನಲ್ಲಿ ಗಜಪಡೆ

elephant (1)

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ಅರಣ್ಯ ಭವನದಲ್ಲಿ ರಿಲ್ಯಾಕ್ಸ್‌ ಮೂಡ್‌ನಲ್ಲಿವೆ.

ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದು, ಇಂದು ಬೆಳಿಗ್ಗೆಯೇ ಆನೆಗಳಿಗೆ ಮಜ್ಜನ ಮಾಡಿಸಲಾಗಿದೆ. ಮಜ್ಜನದ ಬಳಿಕ ಆನೆಗಳು ವಾಕಿಂಗ್‌ ಮಾಡಿವೆ.

ಅರಣ್ಯ ಭವನದಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಗೆ ಮಾವುತರು ಹಾಗೂ ಕಾವಾಡಿಗರು ಆರೈಕೆ ಮಾಡುತ್ತಾ ಇದ್ದಾರೆ. ಆನೆಗಳು ಕೂಡ ಬಹಳ ಸೌಮ್ಯವಾಗಿ ವರ್ತಿಸುತ್ತಿವೆ.

ಇನ್ನು ನಿನ್ನೆ ಅಭಿಮನ್ಯು, ಭೀಮ, ಪ್ರಶಾಂತ, ಕಂಜನ್‌, ಲಕ್ಷ್ಮೀ, ಕಾವೇರಿ, ಧನಂಜಯ, ಮಹೇಂದ್ರ, ಏಕಲವ್ಯ ಆನೆಗಳು ಮೈಸೂರಿಗೆ ಆಗಮಿಸಿವೆ.

Tags:
error: Content is protected !!