ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಪರಿಸ್ಥಿತಿಯನ್ನೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಸಾರಿಗೆ ನೌಕರರು ಹಠ ಮಾಡೋದು ಸರಿಯಲ್ಲ. ನೌಕರರು ಸಹಕಾರ ಕೊಡಬೇಕು. ಸಾರಿಗೆ ನೌಕರರ ಜೊತೆ ಸಿಎಂ ಹಾಗೂ ಸಚಿವರು ಸಭೆ ಮಾಡಿದ್ದಾರೆ. ಸರ್ಕಾರದ ಪರಿಸ್ಥಿತಿಯನ್ನು ಸಾರಿಗೆ ನೌಕರರು ಗಮನದಲ್ಲಿಟ್ಟುಕೊಳ್ಳಬೇಕು. ನಾಗರಿಕರ ವಿಚಾರವನ್ನೂ ಗಮದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ. ಎಲ್ಲದಕ್ಕಿಂತಲೂ ಸಾರ್ವಜನಿಕರ ಹಿತ ಮುಖ್ಯ. ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಿ. ಹಠ ಮಾಡೋದು ಬೇಡ ಎಂದು ಮನವಿ ಮಾಡಿದರು.





