Mysore
34
few clouds

Social Media

ಗುರುವಾರ, 09 ಏಪ್ರಿಲ 2026
Light
Dark

ಚಾಮುಂಡೇಶ್ವರಿ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿಂದು ಚಾಮುಂಡೇಶ್ವರಿ ಕೇತ್ರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಜಿಲ್ಲಾ ಪಂಚಾಯಿತಿಯ ಅಬ್ದುಲ್‌ ನಜೀರ್‌ ಸಾಬ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಇ-ಖಾತೆ ಸಮಸ್ಯೆ, ಗ್ರಾಮ ಪಂಚಾಯಿತಿಗಳಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು, ಇ-ಖಾತೆಯಿಂದ ಜನರಿಗೆ ಭಾರೀ ತೊಂದರೆಯಾಗುತ್ತಿದೆ. ಈ ಬಗ್ಗೆ ನಮ್ಮ ಕಚೇರಿಗೆ ಸಾಕಷ್ಟು ದೂರುಗಳು ಬರುತ್ತಿವೆ ಎಂದರು.

ಇದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೆಲಸ ಕಾರ್ಯಗಳ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು.

ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ 3260 ಮನೆಗಳು ಬರಲಿದ್ದು, ಎಷ್ಟು ಮನೆಗಳಿಗೆ ಖಾತೆ ಆಗಿದೆ ಎಂದು ಪ್ರಶ್ನೆ ಮಾಡಿದರು. ಪಟ್ಟಣ ಪಂಚಾಯಿತಿ ಆಗಿ ಐದು ವರ್ಷ ಕಳೆದರೂ ಇನ್ನೂ ಕೆಲಸಗಳು ಆಗಿಲ್ಲವೇ ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

Tags:
error: Content is protected !!