Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಎನ್‌ಎಸ್‌ಎಸ್‌ನಿಂದ ನಾಯಕತ್ವ ಗುಣ, ಸೇವಾ ಮನೋಭಾವ ಬೆಳೆಯುತ್ತದೆ: ಡಾ.ಕೆ.ಎಂ.ಹರಿಣಿ ಕುಮಾರ್

ಮಂಡ್ಯ: ಎಎನ್‌ಎಸ್‌ಎಸ್‌ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಹಾಗೂ ಸಮಾಜ ಸೇವೆ ಮಾಡುವ ಮನೋಭಾವ ಬೆಳೆಯುತ್ತದೆ ಎಂದು ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿ ಡಾ.ಕೆ.ಎಂ.ಹರಿಣಿ ಕುಮಾರ್ ತಿಳಿಸಿದರು.

ಮಂಡ್ಯ ತಾಲೂಕಿನ ಚಿಕ್ಕಬಳ್ಳಿ- ಆನಸೋಸಲು ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕೃಷಿ ಮಹಾವಿದ್ಯಾಲಯ ವಿ.ಸಿ. ಫಾರಂ ವತಿಯಿಂದ ನಡೆದ ದ್ವಿತೀಯ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ 2025-26 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಸಂತೋಷದ ಜೊತೆಗೆ ಅದಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ ಎಂದರು.

ಜಿಲ್ಲೆಯಲ್ಲಿ ಬಯೋ ಎಥನಾಲ್‌ಗೆ ರೈತರು ಹೆಚ್ಚು ಒತ್ತುಕೊಡಬೇಕು. ಎಥೆನಾಲ್ ಬಳಕೆ ಮಾಡಲು ಜಿಲ್ಲೆ ಸೂಕ್ತವಾಗಿದೆ. ರೈತರು ಎಥನಾಲ್ ಮಾಡುವುದರಿಂದ ಅವರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ರೈತರಿಂದ ಸಾಧ್ಯಕ್ಕೆ ಆಹಾರ ಮತ್ತು ಮೇವು ಸಿಗುತ್ತಿದೆ. ಬಯೋ ಪೆಟ್ರೋಲ್, ಬಯೋ ಡೀಸಲ್, ವಿದ್ಯುಚ್ಛಕ್ತಿ ರೈತರಿಂದ ಬರಬೇಕು ಎಂದು ತಿಳಿಸಿದರು.

ಎನ್‌ಎಸ್‌ಎಸ್ ಶಿಬಿರಗಳಲ್ಲಿ ಸ್ವಚ್ಛತೆ ಹಾಗೂ ಇತರೆ ವಿಶೇಷ ಕಾರ್ಯಕ್ರಮಗಳ ಜೊತೆಗೆ ಉಪನ್ಯಾಸ ಕಾರ್ಯಕ್ರಮಗಳು ನಡೆಯುತ್ತವೆ. ಇಲ್ಲಿನ ಗ್ರಾಮಸ್ಥರು ಶಿಬಿರವನ್ನು ಯಶಸ್ವಿಯಾಗಿ ನಡೆಸಲು ಸಂಪೂರ್ಣ ಸಹಕಾರ ನೀಡುತ್ತಾರೆ. ಎಲ್ಲವನ್ನು ಬಳಸಿಕೊಂಡು ವಿಶೇಷ ಶಿಬಿರ ಆಯೋಜನೆ ಮಾಡಿ ಎಂದು ತಿಳಿಸಿದರು.

Tags:
error: Content is protected !!