ಹುಣಸೂರು: ಗೂಡ್ಸ್ ವಾಹನ ಪಲ್ಟಿಯಾಗಿ ಏಳು ಮಂದಿ ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಡೆದಿದೆ.
ಹುಣಸೂರು ಬನ್ನಿಕುಪ್ಪೆ ಫ್ರೌಢಶಾಲೆ ವಿದ್ಯಾರ್ಥಿಗಳಾದ ಪಾಲಾಕ್ಷ, ವಿದ್ಯಾಚರಣ, ಅಪ್ಪು, ನಿತಿನ್, ಚಂದ್ರಶೇಖರ್, ಮನುಕುಮಾರ್ ಹಾಗೂ ಸಂಜಯ್ ಎಂಬುವವರೇ ಗಾಯಗೊಂಡವರಾಗಿದ್ದಾರೆ. ವಿದ್ಯಾರ್ಥಿ ಪಾಲಾಕ್ಷ ಎಂಬುವವನಿಗೆ ಗಂಭೀರ ಗಾಯಗಳಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ವಿವರ: ವಿದ್ಯಾರ್ಥಿಗಳು ಶಾಲೆಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದರು. ಬಸ್ ಬರುವುದು ತಡವಾದ ಹಿನ್ನೆಲೆಯಲ್ಲಿ ಅದೇ ಮಾರ್ಗದಲ್ಲಿ ಬಂದ ಹಾಲಿನ ವಾಹನವನ್ನು ಹತ್ತಿದರು.
ಈ ವೇಳೆ ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿ ಆಟೋ ಪಲ್ಟಿಯಾಗಿ ಘಟನೆ ಸಂಭವಿಸಿದೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





