Mysore
20
few clouds

Social Media

ಶನಿವಾರ, 24 ಜನವರಿ 2026
Light
Dark

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ: ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

MUDA case surpeme court verdict : CM Siddaramaiah reacts

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಅಸ್ಥಿಪಂಜರ ಶೋಧ ಕಾರ್ಯಾಚರಣೆ ಸ್ಥಳದ ಸಮೀಪ ಹಲ್ಲೆ ನಡೆಸಲಾಗಿದೆ. ನೇತ್ರಾವತಿಯ ಪಾಂಗಳ ಬಳಿ ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ. ಸುಳ್ಳು ವರದಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಾರೆ.

ಅಜಯ್‌, ಅಭಿಷೇಕ್‌, ಸಂತೋಷ್‌ ಎಂಬುವವರ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಲಾಗಿದೆ. ಕ್ಯಾಮರಾ ಕಸಿದುಕೊಂಡು ಹಾನಿ ಮಾಡಲಾಗಿದೆ ಎನ್ನಲಾಗಿದ್ದು, ಈ ವೇಳೆ ಪರಿಸ್ಥಿತಿ ಕೈ ಮೀರಿದೆ.

ಯುವಕರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದ್ದು, ಭಾರೀ ಸಂಖ್ಯೆಯ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಹಲ್ಲೆಗೊಳಗಾದ ಯುವಕರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಕಾನೂನು ಎಲ್ಲರಿಗೂ ಒಂದೇ, ಯಾರೇ ತಪ್ಪು ಮಾಡಿದರೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಾಳೆ ಪ್ರತಿಭಟನೆ ನಡೆಸಲು ನಾವು ಸಿದ್ಧರಿದ್ದೇವೆ. ನಾಳೆ ಪ್ರತಿಭಟನೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

Tags:
error: Content is protected !!