ಮೈಸೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ.
ನಾಳೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಜನರು ಲಗ್ಗೆ ಇಟ್ಟಿದ್ದಾರೆ. ಹೂವು, ಹಣ್ಣು, ತೆಂಗಿನಕಾಯಿ, ಬಾಳೆ ದಿಂಡು ಸೇರಿದಂತೆ ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿ ಮಾಡಲು ಆಗಮಿಸುತ್ತಿದ್ದು, ಮಾರುಕಟ್ಟೆಯಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೇರಿವೆ. ಬೆಲೆ ಏರಿಕೆ ನಡುವೆಯೂ ಜನರು ಖರೀದಿಯಲ್ಲಿ ತೊಡಗಿದ್ದು, ಮಾರುಕಟ್ಟೆಯ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.





