ಗುಂಡ್ಲುಪೇಟೆ : ತಾಲ್ಲೂಕಿನ ಹೊನ್ನೆಗೌಡನಹಳ್ಳಿ ಗ್ರಾಮದ ಚಿಕ್ಕನಂಜಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ.
ಗ್ರಾಮದ ತಮ್ಮ ಮನೆಯ ಹಿತ್ತಲಿನಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಶುಕ್ರವಾರ ಬೆಳಗಿನ ಜಾವ 4 ಗಂಟೆಯ ಸಮಯದಲ್ಲಿ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಸುಮಾರು 50 ಸಾವಿರ ರೂ. ಮೌಲ್ಯದ ಹಸು ಸಾವಿಗೀಡಾಗಿರುವುದರಿಂದ ರೈತ ಚಿಕ್ಕನಂಜಪ್ಪ ಸಂಕಷ್ಟದಲ್ಲಿದ್ದು ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.





