ಕೊಡಗು: ಆಟೋ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಇಂಜಿಲಗೆರೆ ಗ್ರಾಮದ ಬಳಿ ನಡೆದಿದೆ.
ಕಾಡಾನೆ ದಾಳಿಯಿಂದ ಗಾಯಗೊಂಡ ಇಂಜಿಲಗೆರೆಯ ನಿವಾಸಿ ಪ್ರದೀಪ್ ಎಂಬುವವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ಳಂಬೆಳಿಗ್ಗೆ ತೋಟವೊಂದರಿಂದ ರಸ್ತೆಗೆ ಬಂದು ಆಟೋ ಮೇಲೆ ಹಠಾತ್ ದಾಳಿ ಮಾಡಿದೆ. ಆಸ್ಪತ್ರೆಗೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಟಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಇನ್ನು ಆನೆ ದಾಳಿ ನಡೆಸಿದ ಸ್ಥಳಕ್ಕೂ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.





