Mysore
15
scattered clouds

Social Media

ಶನಿವಾರ, 31 ಜನವರಿ 2026
Light
Dark

ಮತಗಳ್ಳತನ ಆರೋಪ: ದಾಖಲೆ ನೀಡಲು ರಾಹುಲ್‌ ಗಾಂಧಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್‌

rahulgandhi

ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನೋಟಿಸ್‌ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿದ್ದಾರೆ.

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನೀಡಿದರೆ ನಮಗೆ ಈ ಬಗ್ಗೆ ತನಿಖೆ ನಡೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದ್ದಾರೆ.

ಆಗಸ್ಟ್.‌7ರಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದೆಹಲಿಯಲ್ಲಿನ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಚುನಾವಣಾ ಅಕ್ರಮಗಳ ದಾಖಲೆಗಳನ್ನು ಪರದೆಯೊಂದರಲ್ಲಿ ಪ್ರದರ್ಶಿಸಿದರು.

ಚುನಾವಣಾ ಆಯೋಗದ ಮೇಲೆ ಗುರುತರ ಆರೋಪ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈವರೆಗೂ ಅಧಿಕೃತವಾಗಿ ದೂರು ನೀಡಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಪಕ್ಷ ರಾಜ್ಯ ಚುನಾವಣಾಧಿಕಾರಿಗೆ ಮನವಿ ಪತ್ರ ನೀಡಿ ಕ್ರಮ ಜರುಗಿಸುವಂತೆ ಕೋರಿದ್ದಾರೆ.

Tags:
error: Content is protected !!