Mysore
28
scattered clouds

Social Media

ಶನಿವಾರ, 30 ಮೇ 2026
Light
Dark

ಆ.17ರವರೆಗೆ ಭಾರಿ ಮಳೆ : ಮೈಸೂರು, ಮಂಡ್ಯಕ್ಕೆ ಯೆಲ್ಲೋ ಅಲರ್ಟ್

Rain Intensifies; Red Alert Issued

ಬೆಂಗಳೂರು : ಮೈಸೂರು, ಮಂಡ್ಯ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಆ. 17ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯೆಲ್ಲೋ ಅಲರ್ಟ್
ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಲ್ಲದೆ, ಚಾಮರಾಜನಗರ, ಕೊಡಗು, ರಾಮನಗರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಗದಗ, ಧಾರವಾಡ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ ?
ಮೈಸೂರು, ಕೆ.ಆರ್.ನಗರ, ಚಾಮರಾಜನಗರ, ಕೆ.ಆರ್.ಪೇಟೆ, ಕಮ್ಮರಡಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಸಿದ್ದಾಪುರ, ಧರ್ಮಸ್ಥಳ, ತಿಪಟೂರು, ಮಹಾಲಿಂಗಪುರ, ತರೀಕೆರೆ ಮುಂತಾದ ಕಡೆ ಭಾನುವಾರ ಉತ್ತಮ ಮಳೆಯಾಗಿದೆ.

Tags:
error: Content is protected !!