Mysore
17
broken clouds

Social Media

ಶನಿವಾರ, 31 ಜನವರಿ 2026
Light
Dark

ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ: ಮಧುಗಿರಿ ಬಂದ್‌

ತುಮಕೂರು: ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಬೆಂಬಲಿಗರು ಪ್ರತಿಭಟನೆ ತೀವ್ರಗೊಳಿಸಿದ್ದು, ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣ ಬಂದ್‌ ಮಾಡಿದ್ದಾರೆ.

ಮಧುಗಿರಿ ಬಸ್‌ ನಿಲ್ದಾಣದ ಸರ್ಕಲ್‌ನಲ್ಲಿ ಜಮಾವಣೆಗೊಂಡ ರಾಜಣ್ಣ ಬೆಂಬಲಿಗರು, ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಟೈರ್‌ಗೆ ಬೆಂಕಿ ಹಚ್ಚಲು ಮುಂದಾದ ಬೆಂಬಲಿಗರನ್ನು ತಡೆದ ಪೊಲೀಸರು ಪ್ರತಿಭಟನೆ ಕೈಬಿಡುವಂತೆ ಹೇಳಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆಯೇ ಮಾತುನ ಚಕಮಕಿ ನಡೆಯಿತು.

ಇನ್ನು ಎಂ.ಜಿ.ಕ್ರೀಡಾಂಗಣದ ಬಳಿ ಬೆಂಬಲಿಗರು ಹೈಡ್ರಾಮಾ ನಡೆಸಿದರು. ಅಭಿಮಾನಿಯೊಬ್ಬ ವಿಷ ಸೇವಿಸಲು ಯತ್ನಿಸಿದ ಪ್ರಸಂಗವೂ ನಡೆಯಿತು. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಮತ್ತೋರ್ವ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು.

Tags:
error: Content is protected !!