Mysore
20
few clouds

Social Media

ಶನಿವಾರ, 24 ಜನವರಿ 2026
Light
Dark

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

asha karyakarte

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮೈಸೂರಿನ ಗಾಂಧಿ ಸರ್ಕಲ್‌ನಲ್ಲಿ ಜಮಾಯಿಸಿದ ಆಶಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಆಶಾ ಕಾರ್ಯಕರ್ತೆಯರು, ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ರೂ.10 ಸಾವಿರ ಗ್ಯಾರಂಟಿಯನ್ನು ಈ ಏಪ್ರಿಲ್ ಇಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು.

2025 ಮಾರ್ಚ್ ರಾಜ್ಯ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ. 1000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು.

ತರ್ಕಬದ್ದಗೊಳಿಸುವ ಹೆಸರಿನಲ್ಲಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಿ. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.

ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು. ನಗರ ಆಶಾಗಳಿಗೆ ರೂ.2000 ಗೌರವಧನ ಹೆಚ್ಚಿಸಬೇಕು. 2025 ಜೂನ್-ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂಬ ಹಕ್ಕೋತ್ತಾಯ ಮಂಡಿಸಿದ್ದಾರೆ.

ನಮ್ಮ ಬೇಡಿಕೆಗಳನ್ನು ಈಡೇರುವವರೆಗೂ ಹೋರಾಟ ನಿಲ್ಲಲ್ಲ ಎಂದು ಎಚ್ಚರಿಕೆ ನೀಡಿರುವ ಆಶಾ ಕಾರ್ಯಕರ್ತೆಯರು, ರಾಜ್ಯ ಸರ್ಕಾರಕ್ಕೆ ಶಾಕ್‌ ನೀಡಿದ್ದಾರೆ.

Tags:
error: Content is protected !!