Mysore
27
overcast clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಬೀದಿ ನಾಯಿಗಳ ಸ್ಥಳಾಂತರ: ಸುಪ್ರೀಂಕೋರ್ಟ್‌ ಆದೇಶಕ್ಕೆ ರಾಹುಲ್‌ ಗಾಂಧಿ ಆಕ್ಷೇಪ

rahulgandhi

ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ ಸುಪ್ರೀಂಕೋರ್ಟ್‌ ನಿರ್ದೇಶನವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರೋಧಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಈ ನಿರ್ಧಾರವು ಹಲವು ವರ್ಷಗಳಿಂದ ಅನುಸರಿಸುತ್ತಿರುವ ಮಾನವೀಯ ಹಾಗೂ ವಿಜ್ಞಾನಾಧಾರಿತ ನೀತಿಯಿಂದ ಹಿಂದಕ್ಕೆ ಸರಿದಂತಾಗಿದೆ. ಮೂಖ ಜೀವಿಗಳು ಅಳಿಸಬೇಕಾದ ಸಮಸ್ಯೆಗಳಲ್ಲ. ಶಸ್ತ್ರಚಿಕಿತ್ಸೆ, ಲಸಿಕೆ ಹಾಗೂ ಸಮುದಾಯದ ಕಾಳಜಿ ಮೂಲಕ ಬೀದಿ ನಾಯಿಗಳನ್ನು ಕ್ರೂರತೆ ಇಲ್ಲದೆ ಸುರಕ್ಷಿತವಾಗಿರಿಸಬಹುದು ಎಂದು ಹೇಳಿದ್ದಾರೆ.

ಸಾಮೂಹಿಕವಾಗಿ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವುದು ಕ್ರೂರ, ದೂರದೃಷ್ಟಿಯಿಲ್ಲದ ಕ್ರಮವಾಗಿದೆ. ಸುಪ್ರೀಂಕೋರ್ಟ್‌ ಮಾನವೀಯತೆ ಹಾಗೂ ಸಹಾನುಭೂತಿಯಿಲ್ಲದೇ ಕಾನೂನನ್ನು ಪಕ್ಕಕ್ಕೆ ಸರಿಸಿದೆ. ಸಾರ್ವಜನಿಕ ಸುರಕ್ಷತೆ ಹಾಗೂ ಪ್ರಾಣಿಗಳ ಕಾಳಜಿ ಎರಡನ್ನೂ ಒಟ್ಟಿಗೆ ಮಾಡಬಹುದು ಎಂದು ಹೇಳಿದ್ದಾರೆ.

Tags:
error: Content is protected !!