Mysore
18
scattered clouds

Social Media

ಭಾನುವಾರ, 25 ಜನವರಿ 2026
Light
Dark

ಚಾ.ನಗರ: ಮಂಟೇಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನೇ ಎಗರಿಸಿದ ಖದೀಮರು

manteswami temple

ಚಾಮರಾಜನಗರ: ನಗರದ ಸಂತೆಮರಹಳ್ಳಿ ರಸ್ತೆಯಲ್ಲಿರುವ ಉಪ್ಪಾರ ಬಡಾವಣೆಯ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಖದೀಮರು ಹೊತ್ತೊಯ್ದಿರುವ ಘಟನೆ ನಡೆದಿದೆ.

ದೇವಾಲಯದ ಬಾಗಿಲು ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಕಾಣಿಕೆ ಹುಂಡಿಯನ್ನು ಕದ್ದು, ಚಿಲ್ಲರೆ ಹಣವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಇನ್ನೂ ಮಂಟೇಸ್ವಾಮಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಬಡಾವಣೆಯ ನಿವಾಸಿಗಳು ಜಮಾಯಿಸಿದ್ದರು.

ಇನ್ನು ಸ್ಥಳಕ್ಕೆ 112 ಗಸ್ತು ವಾಹನದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪಟ್ಟಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

Tags:
error: Content is protected !!