Mysore
19
few clouds

Social Media

ಬುಧವಾರ, 21 ಜನವರಿ 2026
Light
Dark

ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನ ವಿಫಲ: ಓರ್ವ ಸೈನಿಕ ಹುತಾತ್ಮ

Operation Akhal Three more terrorists killed

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆಗಳು ವಿಫಲಗೊಳಿಸಿವೆ.

ಈ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಆಗಸ್ಟ್.‌11ರಂದು ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ಬಿಎಸ್‌ಎಫ್‌ ಸಿಬ್ಬಂದಿ ಗುಂಡು ಹಾರಿಸಿದ ನಂತರ ಗಾಯಗೊಂಡ ಪಾಕಿಸ್ತಾನಿ ಒಳನುಸುಳುಕೋರರನ್ನು ಬಂಧಿಸಲಾಗಿತ್ತು.

Tags:
error: Content is protected !!