ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.
ಕೊಲೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ಮಧ್ಯೆ ನಟ ದರ್ಶನ್ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಇಂದು ಸುಪ್ರೀಂಕೋರ್ಟ್ ಏಳು ಮಂದಿ ಆರೋಪಿಗಳಿಗೆ ನೀಡಿದ್ದ ಜಾಮೀನನ್ನು ರದ್ದು ಮಾಡಿ ತೀರ್ಪು ನೀಡಿದೆ.
ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್‌ಮೆಂಟ್ ನೀಡಲಾಗಿದೆ. ಜೈಲು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕಿತ್ತು. ಇನ್ನು ಮುಂದೆ ಯಾವುದೇ ಜೈಲಿನಲ್ಲಿ ಫೋಟೋ ಕಂಡುಬಂದರೆ ಕ್ರಮ ಜರುಗಿಸಲಾಗುತ್ತದೆ. ಆರೋಪಿ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದಿದರೆ ಕ್ರಮ ಎಂದು ಖಡಕ್ ಎಚ್ಚರಿಕೆ ನೀಡಿದೆ.



