ಬೆಂಗಳೂರು : ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಪೊಲೀಸರು ಅಪಾರ್ಟ್‌ಮೆಂಟ್‌ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಘಟನೆ ಹಿನ್ನೆಲೆ ; ನಟಿ ಪವಿತ್ರಾ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ 33 ವರ್ಷದ ರೇಣುಕಾಸ್ವಾಮಿ ಎಂಬ ದರ್ಶನ್ ಅಭಿಮಾನಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ದರ್ಶನ್, ನಟಿ ಪವಿತ್ರಾ ಗೌಡ ಮತ್ತು ಇತರ ಹಲವರ ಮೇಲಿದೆ. ಕಳೆದ ವರ್ಷ ಜೂನ್ 8ರಂದು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿನ ಶೆಡ್ನಲ್ಲಿ ಮೂರು ದಿನಗಳ ಕಾಲ ಬಂಧಿಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಿ ಶವವನ್ನು ಚರಂಡಿಯಲ್ಲಿ ಎಸೆದು ಹೋಗಿದ್ದರು. ನಂತರ ಶವ ಸಿಕ್ಕಿತ್ತು ಎಂದು ಪೊಲೀಸರು ಕೋರ್ಟ್ ಗೆ ತಿಳಿಸಿದ್ದರು.
2024 ಜೂನ್ 8ರಂದು ಚಿತ್ರದುರ್ಗದ ರೇಣುಕಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬೆಂಗಳೂರು ಪೊಲೀಸರು ಬಂಧನ ಮಾಡಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳಿಗೆ ಡಿಸೆಂಬರ್ ವೇಳೆಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು.





