Mysore
22
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ: ಆಗಸ್ಟ್.‌19ರವರೆಗೂ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಆಗಸ್ಟ್.‌19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ ದೇಶದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್.‌19ರವರೆಗೂ ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಲಿದೆ ಎಂದು ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್‌, ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ಘೋಷಣೆ ಮಾಡಲಾಗಿದೆ.

ಇನ್ನು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಗದಗ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Tags:
error: Content is protected !!