Mysore
29
few clouds

Social Media

ಶುಕ್ರವಾರ, 30 ಜನವರಿ 2026
Light
Dark

ಮೈಸೂರು| ಪೊಲೀಸ್ ಠಾಣೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ 

police celabratiom kishan
ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಪೊಲೀಸ್‌ ಠಾಣೆಯೊಂದರಲ್ಲೂ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು.
ಮೈಸೂರಿನ ಅಗ್ರಹಾರ ವೃತ್ತದಲ್ಲಿರುವ ಕೃಷ್ಣರಾಜ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯರೊಂದಿಗೆ ಸೇರಿ ಶ್ರೀಕೃಷ್ಣನ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬಳಿಕ ವೃತ್ತ ನಿರೀಕ್ಷಕ ಧನರಾಜ್ ನೇತೃತ್ವದಲ್ಲಿ ಪೂಜೆ ಸಲ್ಲಿಕೆ ಮಾಡಲಾಗಿದ್ದು, ನೆರೆದಿದ್ದ ಜನರಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಇದೆ ವೇಳೆ ಸಬ್ ಇನ್ಸ್‌ಪೆಕ್ಟರ್ ವಿನೋದ್, ಮುಖ್ಯ ಪೇದೆ ಶ್ರೀನಿವಾಸ್ ಪ್ರಸಾದ್, ರಾಜಶೇಖರ್, ಅರುಣ್ ಕುಮಾರ್ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸ್ಥಳೀಯ ಮುಖಂಡರು ಭಾಗಿಯಾಗಿದ್ದರು.
Tags:
error: Content is protected !!