Mysore
14
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ತಂತ್ರಜ್ಞಾನ ಕ್ರಾಂತಿ ಮಾಡಿದ್ದು ರಾಜೀವ್ ಗಾಂಧಿ : ಡಿಸಿಎಂ ಡಿಕೆ ಶಿವಕುಮಾರ್

DK Shivakumar

ಬೆಂಗಳೂರು‌ : ದೇಶದ ಯುವಕರಿಗೆ ಹದಿನೆಂಟನೇ ವರ್ಷಕ್ಕೆ ಮತದಾನದ ಹಕ್ಕು ನೀಡಿದ್ದು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಇಂದು ಏರ್ಪಡಿಸಿದ್ದ ರನ್ ಫಾರ್ ರಾಜೀವ್ ಮ್ಯಾರಥಾನ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಕೂಡ ಚಿಕ್ಕ ವಯಸ್ಸಿನಲ್ಲಿ 10-15 ಕಿ.ಮೀ. ಓಡುತ್ತಿದ್ದೆ. ಇದೇ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ರಾಜೀವ್ ಗಾಂಧಿ ಅವರ ನೆನಪಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ನಮ್ಮ ದೇಶದ ಯುವಕರಿಗೆ 21 ವರ್ಷಕ್ಕೆ ಮತದಾನದ ಹಕ್ಕು ನೀಡಲಾಗಿತ್ತು. ಅದನ್ನು 18 ವರ್ಷಕ್ಕೆ ಇಳಿಸಿದ್ದು ರಾಜೀವ್ ಗಾಂಧಿ ಅವರು. ಈ ನಿರ್ಧಾರವನ್ನು ವಿರೋಧ ಪಕ್ಷಗಳು ಟೀಕೆ ಮಾಡಿದವು. ಅದಕ್ಕೆ ರಾಜೀವ್ ಗಾಂಧಿ ಅವರು ನಾವು 16ನೇ ವಯಸ್ಸಿಗೆ ಎಸ್‍ಎಸ್‍ಎಲ್‍ಸಿ ಪಾಸಾದ ಯುವಕರನ್ನು ದೇಶದ ಗಡಿ ಕಾಯಲು ಸೇನೆಗೆ ನೇಮಿಸುತ್ತೇವೆ. ಅದೇ ರೀತಿ ಪ್ರಜಾಪ್ರಭುತ್ವ ಕಾಯಲು ಅವರಿಗೆ ಮತದಾನದ ಹಕ್ಕು ನೀಡಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಂಚಾಯ್ತಿಯಿಂದ ಪಾರ್ಲಿಮೆಂಟ್‍ವರೆಗೂ ಜನಪ್ರತಿನಿಧಿಗಳು ಆಯ್ಕೆ ಆಗಬೇಕು ಎಂದು ಹೇಳಿದರು.

ನಾನು ವಿದ್ಯಾರ್ಥಿಯಾಗಿದ್ದಾಗ ಎನ್‍ಎಸ್‍ಯುಐ ನಾಯಕನಾಗಿದ್ದೆ. ಆಗ ನಮ ಬಳಿ ಫೋನ್ ಇರಲಿಲ್ಲ. ಲ್ಯಾಂಡ್‍ಲೈನ್ ಸಂಪರ್ಕ ಪಡೆಯಲು 3-4 ವರ್ಷ ಕಾಯಬೇಕಿತ್ತು. ತಂತ್ರಜ್ಞಾನ ಕ್ರಾಂತಿ ಮೂಲಕ ಇಂದು ನಿಮೆಲ್ಲರ ಕೈಗೆ ಮೊಬೈಲ್ ಬರುವಂತೆ ಮಾಡಿರುವುದೇ ರಾಜೀವ್ ಗಾಂಧಿ. ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಧೀಮಂತ ನಾಯಕರ ನೆನಪಲ್ಲಿ ನೀವು ಹೆಜ್ಜೆ ಹಾಕಲು ಬಂದಿದ್ದೀರಿ. ನಿಮಗೆ ಅಭಿನಂದನೆಗಳು ಎಂದು ಹೇಳಿದರು.

ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ ಎಂಬ ಶ್ಲೋಕದ ಆಶಯದಂತೆ ನಿಮೆಲ್ಲರಿಗೂ ಮಂಗಳವಾಗಲಿ, ಆರೋಗ್ಯ, ಐಶ್ವರ್ಯ ನಿಮದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದರು. ಬೆಂಗಳೂರು ಈಗ ಗ್ರೇಟರ್ ಬೆಂಗಳೂರು ಆಗಿದೆ. ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಬೆಂಗಳೂರಿನ ಮೂಲಕ ನೋಡಲಾಗುತ್ತಿದೆ ಎಂದಿದ್ದರು.

ಇದು ಸಾಧ್ಯವಾಗಿದ್ದು ನಿಮೆಲ್ಲರಿಂದ ಎಂದು ತಿಳಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ ಅವರ ನೆನಪಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಯುವಕರು ಭಾಗವಹಿಸಿದ್ದು, ನಮ ಯುವ ನಾಯಕರು ಈ ಕಾರ್ಯಕ್ರಮ ಆಯೋಜಿಸಿದ್ದು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

Tags:
error: Content is protected !!