Mysore
21
clear sky

Social Media

ಬುಧವಾರ, 01 ಏಪ್ರಿಲ 2026
Light
Dark

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.

ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ ಕಂಡುಬಂದಿದ್ದು, ಜಲಾಶಯದ ಹೊರಹರಿವಿನಲ್ಲೂ ಏರಿಕೆ ಮಾಡಲಾಗಿದೆ.

ಜಲಾಶಯದ ಇಂದಿನ ಒಳಹರಿವು 33,052 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವು 80,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 124.54 ಅಡಿಗಳಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 49.089 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.

Tags:
error: Content is protected !!