Mysore
26
overcast clouds

Social Media

ಶನಿವಾರ, 04 ಏಪ್ರಿಲ 2026
Light
Dark

ಕೆಆರ್‌ಎಸ್‌ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಕೊಳ್ಳೇಗಾಲದ ಅನೇಕ ಗ್ರಾಮಗಳಿಗೆ ಎಚ್ಚರಿಕೆ

KRS

ಕೊಳ್ಳೇಗಾಲ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದ, ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಕಾವೇರಿ ನದಿಯ ದಡದಲ್ಲಿರುವ ಗ್ರಾಮಗಳಾದ ಮುಳ್ಳೂರು, ದಾಸನಪುರ, ಹಳೇ ಅಣಗಳ್ಳಿ, ಹಳೇ ಹಂಪಾಪುರ, ಯಡಕುರಿಯಾ ಗ್ರಾಮಸ್ಥರು ಎಚ್ಚರಿಕೆ ವಹಿಸಬೇಕಾಗಿ ಸೂಚನೆ ನೀಡಲಾಗಿದೆ. ನಿಮ್ಮ ನಿಮ್ಮ ಜಾನುವಾರು ಹಾಗೂ ಆಸ್ತಿಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಗ್ರಾಮಸ್ಥರಿಗೆ ತಹಶಿಲ್ದಾರ್ ಬಸವರಾಜು ಸೂಚನೆ ನೀಡಿದ್ದಾರೆ.

ಇಂದು ಗ್ರಾಮಗಳಿಗೆ ಭೇಟಿ ನೀಡಿದ ಅವರು, ಪರಿಶೀಲನೆ ನಡೆಸಿ ಕೆಆರ್‌ಎಸ್‌ ಜಲಾಶಯದಿಂದ ಇನ್ನೂ ಹೆಚ್ಚಿನ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.

ಮತ್ತಷ್ಟು ನೀರು ಹೆಚ್ಚಾದರೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುವ ಸಂಭವವಿರುವುದರಿಂದ ಗ್ರಾಮಸ್ಥರು ಅಧಿಕಾರಿಗಳ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದರು.

Tags:
error: Content is protected !!