ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆರೆವಾಸ ಅನುಭವಿಸುತ್ತಿರುವ ನಟ ದರ್ಶನ್ ಪುಸ್ತಕಗಳ ಮೊರೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ನಟ ದರ್ಶನ್‌ಗೆ ಯಾವುದೇ ರಾಜಾತಿಥ್ಯ ಇಲ್ಲ. ಸಹ ಕೈದಿಗಳಿಗೆ ನೀಡುವ ಊಟ, ತಿಂಡಿಯನ್ನೇ ನೀಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಜೈಲಿನಲ್ಲಿ ದಿನ ಕಳೆಯಲು ದರ್ಶನ್ ಪುಸ್ತಕಗಳ ಮೊರೆ ಹೋಗಿದ್ದಾರೆ. ಈ ಬಗ್ಗೆ ಜೈಲಿನ ಅಧಿಕಾರಿಗಳಿಗೆ ಮನವಿ ಮಾಡಿ ಗ್ರಂಥಾಲಯದಿಂದ ಪುಸ್ತಕಗಳನ್ನು ತರಿಸಿಕೊಂಡಿದ್ದಾರೆ.
ಇನ್ನು ಜೈಲಿನಲ್ಲಿ ಬಂಧಿಯಾಗಿರುವ ದರ್ಶನ್ ಮೇಲೆ ತೀವ್ರ ನಿಗಾ ಇಡಲಾಗಿದ್ದು, ಯಾವುದೇ ಪೊಲೀಸ್ ಸಿಬ್ಬಂದಿ ದರ್ಶನ್ ಜೊತೆ ಮಾತನಾಡದಂತೆ ಸೂಚನೆ ನೀಡಲಾಗಿದೆ.
ಇನ್ನು ನಟ ದರ್ಶನ್‌ರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಎಚ್ 64ರಲ್ಲಿ ವಿಚಾರಣೆ ನಡೆಸಿ ಆಗಸ್ಟ್.23ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.





