ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಬೆಳಿಗ್ಗೆ ಹಾಗೂ ಸಂಜೆ ತಾಲೀಮು ಮುಂದುವರಿಸಲಾಗಿದೆ.
ಇಂದು ಬೆಳಿಗ್ಗೆ ದಸರಾ ಗಜಪಡೆ ತಾಲೀಮಿನಲ್ಲಿ ಭಾಗಿಯಾಗಿದ್ದು, ಅರಮನೆಯಿಂದ ಆರ್‌ಎಂಸಿ ವೃತ್ತದವರೆಗೆ ತಾಲೀಮು ನಡೆಸಿವೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ತಾಲೀಮಿನಲ್ಲಿ ಭಾಗಿಯಾಗಿದ್ದವು. ಆದರೆ ಇಂದಿನ ತಾಲೀಮಿನಲ್ಲಿ ಪ್ರಶಾಂತ ಆನೆ ಮಾತ್ರ ಗೈರಾಗಿತ್ತು.
ಗಜಪಡೆ ತಾಲೀಮು ನಡೆಸುವ ವೇಳೆ ರಸ್ತೆ ಅಕ್ಕಪಕ್ಕದಲ್ಲಿದ್ದ ಜನರು ತಾಲೀಮು ವೀಕ್ಷಣೆ ಮಾಡಿ ಖುಷಿಪಟ್ಟರು. ಮಹಿಳೆಯರು, ಮಕ್ಕಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ರಸ್ತೆಯಲ್ಲಿ ನಿಂತು ಆನೆಗಳ ವಾಕಿಂಗ್ ವೀಕ್ಷಣೆ ಮಾಡಿ, ತಮ್ಮ ತಮ್ಮ ಮೊಬೈಲ್‌ಗಳಲ್ಲಿ ದೃಶ್ಯವನ್ನು ಸೆರೆ ಹಿಡಿದರು.





