ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೆಲ್ ಸುತ್ತಾಮುತ್ತಾ ಇದ್ದ ಆರೋಪಿಗಳನ್ನು ಬೇರೆ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ.
ಕಳೆದ ಬಾರಿ ಪರಪ್ಪನ ಅಗ್ರಹಾರದಲ್ಲಿ ನಡೆದ ಅವಾಂತರದಿಂದ ಫುಲ್ ಅಲರ್ಟ್ ಆಗಿರುವ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ನಟ ದರ್ಶನ್ ಇಡಲಾಗಿದ್ದ ಸೆಲ್‌ಗೆ ಬಂದೋಬಸ್ತ್ ಮಾಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಟ ದರ್ಶನ್ ಸೆಲ್ ಸುತ್ತಾಮುತ್ತಾ ಇದ್ದ ನಟೋರಿಯಸ್ ರೌಡಿಗಳನ್ನು ಶಿಫ್ಟ್ ಮಾಡಲಾಗಿದೆ. ದರ್ಶನ್ ಸೆಲ್‌ಗೆ ಹೊಂದಿಕೊಂಡಿರುವ ಸೆಲ್‌ಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ.
ಈ ಹಿಂದೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆ ಹರಟೆ ಹೊಡೆಯುತ್ತಾ ಕುಳಿತಿದ್ದ ನಟ ದರ್ಶನ್ ಫೋಟೋ ವೈರಲ್ ಆಗಿದ್ದವು. ಈ ಬಗ್ಗೆ ಸುಪ್ರೀಂಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಪೊಲೀಸರು ನಿಗಾ ವಹಿಸಿದ್ದಾರೆ.
ವಿಲ್ಸನ್ ಗಾರ್ಡನ್ ನಾಗನ ಜೊತೆ ನಟ ದರ್ಶನ್ ಕುಳಿತುಕೊಂಡು ಸಿಗರೇಟು ಹೊಡೆದಿದ್ದ. ಲ್ಯಾನ್‌ನಲ್ಲಿ ಕುಳಿತು ಕಾಫಿ ಕುಡಿದ ಫೋಟೋಗಳು ವೈರಲ್ ಆಗಿದ್ದವು. ಈ ಬಗ್ಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಜೈಲಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.





