ಧರ್ಮಸ್ಥಳ : ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ ಆರಂಭಿಸಿದ ನಂತರ ಮೊದಲ ಬಾರಿ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಡಾ.ವೀರೇಂದ್ರ ಹೆಗಡೆ, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಸೃಷ್ಠಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ತರಾವರಿಯಾಗಿ ಸುದ್ದಿ ಪ್ರಕಟಿಸಲಾಗುತ್ತಿದೆ. ʻಎಸ್ಐಟಿʼ ತನಿಖೆಯಿಂದ ಸತ್ಯ ಹೊರ ಬರಲಿದೆ ಎಂದು ಹೇಳಿದ್ದಾರೆ.
ಈ ಆರೋಪಗಳ ತನಿಖೆಗಾಗಿ, ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಿದೆ. ಇದು ಅಂತಿಮವಾಗಿ ಮಾನವ ಅವಶೇಷಗಳನ್ನು ಪತ್ತೆಹಚ್ಚಲು ಹಲವಾರು ಸ್ಥಳಗಳಲ್ಲಿ ಉತ್ಖನನ ನಡೆಸಿದೆ.
ಅಕ್ಟೋಬರ್ 9, 2012 ರಂದು ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ(17) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ಬಾಲಕಿಯ ನ್ಯಾಯಕ್ಕಾಗಿ ಈಗಲೂ ಪ್ರತಿಭಟನೆಗಳು ನಡೆಯುತ್ತಿವೆ. ಈ ಆರೋಪಗಳು ಆಧಾರರಹಿತ ಮತ್ತು ಸುಳ್ಳು ಆರೋಪಗಳು. ಇದರಿಂದ ನನಗೆ ನಿಜವಾಗಿಯೂ ನೋವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಷಯಗಳನ್ನು ಬಿಂಬಿಸುವ ರೀತಿ ನೈತಿಕವಾಗಿ ತಪ್ಪು ಎಂದು ಹೇಳಿದ್ದಾರೆ.
ಗೃಹ ಸಚಿವ ಜಿ ಪರಮೇಶ್ವರ ಅವರು ವಿಧಾನಸಭೆಯಲ್ಲಿ ಎಸ್‌ಐಟಿ ಸಮಸ್ಯೆಯ ಆಳಕ್ಕೆ ಹೋಗುತ್ತದೆ ಎಂದು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಹೆಗ್ಗಡೆ, ನಾವು ಅದೇ ದಿನ ಎಸ್‌ಐಟಿಯನ್ನು ಸ್ವಾಗತಿಸಿದ್ದೇವೆ. ರಾಜ್ಯ ಸರ್ಕಾರ ಎಸ್ ಐಟಿ ರಚಿಸಿರುವುದು ಒಳ್ಳೆಯದು ಮತ್ತು ಸತ್ಯ ಒಮ್ಮೆ ಹೊರಬರಬೇಕು. ಆರೋಪ ಕೇಳಿಬಂದಾಗ ತನಿಖೆ ಮಾಡುವುದು ಒಳ್ಳೆಯದು. ಇಲ್ಲದಿದ್ದರೆ ಅವು ಹಾಗೆಯೇ ಉಳಿಯುತ್ತವೆ ಎಂದಿದ್ದಾರೆ.
ಸಿಬಿಐ ತನಿಖೆಗೂ ಸಹಕಾರ
ಎಸ್‌ಐಟಿ ಬಗ್ಗೆ ನನಗೆ ನಂಬಿಕೆಯಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಸತ್ಯವನ್ನು ಹೊರ ತರಲಿದೆ. ಸಿಬಿಐ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.





