Mysore
27
clear sky

Social Media

ಗುರುವಾರ, 22 ಜನವರಿ 2026
Light
Dark

ಅನನ್ಯ ಭಟ್‌ ನಾಪತ್ತೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಬೆಂಗಳೂರು : ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ವಿಶೇಷ ತನಿಖಾ ದಳ ( ಎಸ್ ಐಟಿ) ಗೆ ಹಸ್ತಾಂತರ ಮಾಡಲಾಗಿದೆ.

ರಾಜ್ಯ ಪೊಲೀಸ್ ಮಹಾನಿದೇರ್ಶಕ ಸಲೀಂ ಅವರು ಪ್ರಕರಣವನ್ನು ಎಸ್ ಐಟಿಗೆ ಹಸ್ತಾಂತರಿಸಿ
ಆದೇಶ ಹೊರಡಿಸಿದ್ದಾರೆ.

ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದರು.

ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದವರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಧರ್ಮಸ್ಥಳದಲ್ಲಿ ಒತ್ತಡದಿಂದ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದ. ಪತ್ರ ಬರೆದ ಬರೆದ ಕೆಲವೇ ದಿನಗಳ ಬಳಿಕ ಅದೇ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನೂ ನೀಡಿದ್ದ. ಬರುವಾಗ ತನ್ನ ಜೊತೆ ಅಸ್ತಿಪಂಜರವೊಂದನ್ನು ತಂದಿದ್ದು, ಅದನ್ನು ಪೊಲೀಸರು ವಿಧಿ ವಿಜ್ಞಾನ ತನಿಖೆಗೆ ಒಳಪಡಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತ ಬಹಳಷ್ಟು ಕಡೆಗಳಲ್ಲಿ ತಾನು ಶವಗಳನ್ನು ಹೂತು ಹಾಕಿರುವುದಾಗಿಯು, ಪೊಲೀಸರು ತನಿಖೆ ನಡೆಸುವುದಾದರೆ ಆ ಸ್ಥಳಗಳನ್ನು ತೋರಿಸುವುದಾಗಿ ಆ ವ್ಯಕ್ತಿ ತಿಳಿಸಿದ್ದ. ಈಗ ಆ ವ್ಯಕ್ತಿಯನ್ನು ಪ್ರತಿನಿಧಿಸುವ ಇಬ್ಬರು ನ್ಯಾಯವಾದಿಗಳು ಎಸ್ ಐ ಟಿ ರಚನೆ ಬಗ್ಗೆ ಬೇಡಿಕೆ ಮುಂದಿಟ್ಟಿದ್ದರು.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆಗಳು ಹಾಗು ಅವುಗಳನ್ನು ಒತ್ತಡದಿಂದಾಗಿ ತಾನೇ ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿರುವುದು
ರಾಜ್ಯ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು.

ಧರ್ಮಸ್ಥಳದಲ್ಲಿ ಅನನ್ಯಾ ಭಟ್ ನಾಪತ್ತೆ ಆರೋಪ​ ಪ್ರಕರಣ ಸಂಬಂಧ ಎಸ್​​ಐಟಿ ಸಿಪಿಐ ಮಂಜುನಾಥ್ ಗೌಡ ನೇತೃತ್ವದ ತಂಡ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​ಪೇಟೆಗೆ ತೆರಳಿ ಮಾಹಿತಿ ಕಲೆ ಹಾಕಿದೆ.

ಸುಜಾತಾ ಭಟ್ 1999ರಿಂದ 2007ರವರೆಗೆ ರಿಪ್ಪನ್​ಪೇಟೆಯಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ. ಧರ್ಮಸ್ಥಳ ಪ್ರಕರಣದಲ್ಲಿ ಸುಜಾತಾ ಭಟ್ ಪಾತ್ರವೇನು? ನಿಜವಾಗಿಯೂ ಅವರಿಗೆ ಮಗಳಿದ್ದರೇ? ಅನನ್ಯಾ ಭಟ್ ಹಿನ್ನೆಲೆ ಏನು ಎಂಬ ಬಗ್ಗೆ ಎಸ್​ಐಟಿ ಮಾಹಿತಿ ಕಲೆ ಹಾಕಿದೆ.

Tags:
error: Content is protected !!