Mysore
27
overcast clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಬ್ರಹ್ಮಾವರ ಪೊಲೀಸರಿಂದ ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ

mahesh thirodi

ಮಂಗಳೂರು: ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿ.ಎಲ್.ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್‌ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್‌ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿ ಎಎಸ್‌ಪಿ ಸುಧಾಕರ್‌ ನಾಯಕ್‌ ನೇತೃತ್ವದ ತಂಡ ಎಂಟ್ರಿ ಕೊಟ್ಟು, ವಿಚಾರಣೆಗೆ ಕರೆದೊಯ್ದಿತ್ತು.

ಈ ವೇಳೆ ಬ್ರಹ್ಮಾವರ ಠಾಣೆ ಪೊಲೀಸರು ಮಹೇಶ್‌ ತಿಮರೋಡಿಯನ್ನು ಬಂಧಿಸಿದ್ದಾರೆ. ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!