ಮೈಸೂರು : ಸುಯೋಗ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಿಂದ ನಟ ಡಾ.ಶಿವರಾಜ್ ಕುಮಾರ್ ಅವರು ಅಭಿನಯದ ‘ಬ್ಯಾಡ್’ ಚಿತ್ರದಲ್ಲಿ ವೈದ್ಯನಾಗಿ ನಟಿಸುವ ಚಿತ್ರೀಕರಣವನ್ನು ಕೈಗೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಇಂದು ಸುಯೋಗ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಅತ್ಯಾಧುನಿಕ ತಂತ್ರಜ್ಞಾನದ ಲೇಸರ್ ಯಂತ್ರವನ್ನು ಅವರು ಉದ್ಘಾಟಿಸಿ ಮಾತನಾಡಿ ಸುಯೋಗ್ ಆಸ್ಪತ್ರೆಯು ಮೈಸೂರಿನ ನಗರದಲ್ಲಿ ಉತ್ತಮ ಆಸ್ಪತ್ರೆಯಾಗಿದೆ. ಅದರಲ್ಲೂ ಕೋವಿಡ್ ಸಮಯದಲ್ಲಿ ಆಸ್ಪತ್ರೆಯ ಸೇವೆ ಅನನ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಪ್ರತಿವರ್ಷ ಸುಯೋಗ ಆಸ್ಪತ್ರೆಯಲ್ಲಿ ಬಡವರಿಗೆ ಉಚಿತ ಆಂಜಿಯೋಗ್ರಾಮ್ ಹಾಗೂ ಆಂಜಿಯೋ ಪ್ಲಾಸ್ಟಿ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದೆ ಎಂದು ಶ್ಲಾಘಿಸಿದರು.
ಸುಯೋಗ ಆಸ್ಪತ್ರೆಯು ಅಂತರಾಷ್ಟ್ರೀಯ ಗುಣಮಟ್ಟದ ಆಸ್ಪತ್ರೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗೀತಾ ಶಿವರಾಜಕುಮಾರ್, ಸುಯೋಗ ಆಸ್ಪತ್ರೆಯ ಅಧ್ಯಕ್ಷರಾದ ಡಾ.ಎಸ್.ಪಿ. ಯೋಗಣ್ಣ, ಟ್ರಸ್ಟಿ ಸುಧಾ ಯೋಗಣ್ಣ, ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸುಯೋಗ್ ಯೋಗಣ್ಣ, ಡಾ. ಅಭಿಷೇಕ್, ಡಾ. ಮೋಹನ್ ಮುಂತಾದವರು ಉಪಸ್ಥಿತರಿದ್ದರು.





