Mysore
23
light rain

Social Media

ಗುರುವಾರ, 08 ಅಕ್ಟೋಬರ್ 2026
Light
Dark

ವಿಚಾರಣೆಗೆ ಹಾಜರಾದ ಯೂಟ್ಯೂಬರ್‌ ಸಮೀರ್‌

youtuber sameer

ಮಂಗಳೂರು: ಸುಮೋಟೋ ಕೇಸ್‌ಗೆ ಸಂಬಂಧಿಸಿದಂತೆ ಯೂಟ್ಯೂಬರ್‌ ಸಮೀರ್‌ ಎಂ.ಡಿ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆಂದು ಹಾಜರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಸಮೀರ್‌ ತನ್ನ ವಕೀಲರ ಜೊತೆ ವಿಚಾರಣೆಗೆಂದು ಹಾಜರಾಗಿದ್ದಾರೆ.

ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ, ತಪ್ಪು ಮಾಹಿತಿ ಹರಡಿದ ಆರೋಪದಲ್ಲಿ ಯೂಟ್ಯೂಬರ್‌ ಸಮೀರ್‌ ವಿರುದ್ಧ ಬೆಳ್ತಂಗಡಿ ಠಾಣೆ ಪೊಲೀಸರು ಸುಮೋಟೋ ಕೇಸ್‌ ದಾಖಲು ಮಾಡಿದ್ದರು.

ವಿಚಾರಣೆಗೆ ಹಾಜರಾಗುವಂತೆ ಸಮೀರ್‌ ಬೆಂಗಳೂರಿನ ನಿವಾಸ ಹಾಗೂ ಬಳ್ಳಾರಿ ನಿವಾಸಕ್ಕೆ ನೋಟಿಸ್‌ ಅಂಟಿಸಲಾಗಿತ್ತು. ಸದ್ಯ ಮೂವರು ವಕೀಲರೊಂದಿಗೆ ಸಮೀರ್‌ ವಿಚಾರಣೆಗೆ ಹಾಜರಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Tags:
error: Content is protected !!