Mysore
19
overcast clouds

Social Media

ಭಾನುವಾರ, 25 ಜನವರಿ 2026
Light
Dark

ಧರ್ಮಸ್ಥಳ ಕೇಸ್‌ ಸಿಬಿಐಗೆ ವಹಿಸಲಿ: ಸಂಸದ ತೇಜಸ್ವಿ ಸೂರ್ಯ ಆಗ್ರಹ

tejasvi surya

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೂಟ್ಯೂಬರ್‌ ಸಮೀರ್‌ ಪರ ದೊಡ್ಡ ಲಾಯರ್‌ ಬರುತ್ತಿದ್ದಾರೆ. ಲಾಯರ್‌ಗಳ ಸಂಭಾವನೆಯೇ 5 ಲಕ್ಷ ರೂ ಇದೆ. ಸಮೀರ್‌ಗೆ ಸಿಎಂ ಸಿದ್ದರಾಮಯ್ಯ ಸಪೋರ್ಟ್‌ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ ಎಂದು ಆರೋಪ ಮಾಡಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಪೊಲೀಸ್‌ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಧಿಕಾರಿಗಳು ಎಸ್‌ಐಟಿ ರಚನೆ ಬೇಡ ಎಂದಿದ್ದರು. ಆದರೂ ಸಿದ್ದರಾಮಯ್ಯ ಎಸ್‌ಐಟಿ ರಚನೆ ಮಾಡಿದ್ದಾರೆ. ಸಿದ್ದರಾಮಯ್ಯ ಯಾರ ಒತ್ತಡಕ್ಕೆ ಎಸ್‌ಐಟಿ ರಚನೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಧರ್ಮಸ್ಥಳ ಕೇಸ್‌ ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುತ್ತಲೇ ಇದ್ದು, ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದಾರೆ.

Tags:
error: Content is protected !!