Mysore
25
moderate rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ಎರಡನೇ ದಿನದ ವಿಚಾರಣೆಗೆ ಹಾಜರಾದ ಯೂಟ್ಯೂಬರ್‌ ಸಮೀರ್‌

sameer

ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಸಮೀರ್‌ ಎಂ.ಡಿ ಅವರಿಂದು ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಸುಮೋಟೋ ಕೇಸ್‌ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್‌ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ನಿನ್ನೆ ವಕೀಲರ ಜೊತೆ ಸಮೀರ್‌ ವಿಚಾರಣೆಗೆ ಹಾಜರಾಗಿದ್ದರು. ಸಮೀರ್‌ರನ್ನು ಬರೋಬ್ಬರಿ 7 ಗಂಟೆಗಳ ಕಾಲ ಪೊಲೀಸರು ವಿಚಾರಣೆ ನಡೆಸಿದ್ದರು. ಬಳಿಕ ಇಂದು ಕೂಡ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಎರಡನೇ ದಿನವಾದ ಇಂದು ವಿಚಾರಣೆಗೆಂದು ಸಮೀರ್‌ ಹಾಜರಾಗಿದ್ದು, ಇಬ್ಬರು ವಕೀಲರು ಕೂಡ ಹಾಜರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!