Mysore
28
scattered clouds

Social Media

ಭಾನುವಾರ, 25 ಜನವರಿ 2026
Light
Dark

ಇಲವಾಲ ಸಂಪರ್ಕ ರಸ್ತೆ ಅಭಿವೃದ್ದಿಗೆ ಚಾಲನೆ ನೀಡಿದ ಶಾಸಕ ರಮೇಶ್‌ ಬಾಬು

ಶ್ರೀರಂಗಪಟ್ಟಣ : ಪಶ್ಚಿಮ ವಾಹಿನಿಯಿಂದ ಬೆಳಗೊಳ ಮೂಲಕ ಇಲವಾಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ೫ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು, ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ೧೮೦ ಕೋಟಿ ರೂ. ಅನುದಾನಲ್ಲಿ ರಸ್ತೆ ಅಭಿವೃದ್ಧಿ ಮಾಡಿದ್ದೇನೆ. ಅಗತ್ಯ ಇರುವ ರಸ್ತೆಗಳನ್ನು ಮೊದಲ ಹಂತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕ್ಷೇತ್ರದಾದ್ಯಂತ ಇತರೆ ರಸ್ತೆಗಳ ಅಭಿವೃದ್ಧಿಗೂ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಹಂತ ಹಂತವಾಗಿ ಕ್ಷೇತ್ರದ ಎಲ್ಲ ರಸ್ತೆಗಳು, ವಿದ್ಯುತ್ ಹಾಗೂ ಕುಡಿಯುವ ನೀರಿನ ಸಂಪರ್ಕ ಸೇರಿದಂತೆ ಮೂಲ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಇದಕ್ಕೂ ಮುನ್ನ ಜೆಡಿಎಂ ಯೋಜನೆಯಡಿ ನೇರಳಕೆರೆಯಲ್ಲಿ ೬೫ ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರು, ೨೫ ಲಕ್ಷ ರೂ. ವೆಚ್ಚದಲ್ಲಿ ಪೈಪ್‌ಲೈನ್ ಕಾಮಗಾರಿ, ಮಾರಸಿಂಗನಹಳ್ಳಿಯಿಂದ ಗಾಮನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸ್ವಾಮಿಗೌಡ, ಯಜಮಾನ್ ವಿಷಕಂಠೇಗೌಡ, ಗ್ರಾಪಂ ಅಧ್ಯಕ್ಷ ರವಿಕುಮಾರ್, ಮಾಜಿ ಅಧ್ಯಕ್ಷರಾದ ಬಿ.ವಿ.ಸುರೇಶ್, ಪುಟ್ಟರಾಜು, ಎಂ.ಬಿ.ಕುಮಾರ್, ತಾಪಂ ಮಾಜಿ ಸದಸ್ಯ ಮಹದೇವಸ್ವಾಮಿ, ಅರವಿಂದ, ರಜಿನಿಕಾಂತ್, ಮಂಜುನಾಥ್, ನಂಜಶೆಟ್ಟಿ, ಡೇರಿ ಅಧ್ಯಕ್ಷ ಬಾಬು, ಮುಖಂಡರಾದ ಕೆಆರ್‌ಎಸ್ ಮಂಜುನಾಥ್, ಜಸ್ವಂತ್ ಮಂಡಿತ್ ಇತರರು ಉಪಸ್ಥಿತರಿದ್ದರು.

Tags:
error: Content is protected !!