Mysore
33
scattered clouds

Social Media

ಶನಿವಾರ, 28 ಮಾರ್ಚ್ 2026
Light
Dark

ಮೈಸೂರು ದಸರಾ ಮಹೋತ್ಸವ: ಜನಸಂದಣಿ ಇರುವ ಕಡೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೂಚನೆ

lakshmikanth reddy

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಅವರು, ಯುವ ಸಂಭ್ರಮ, ಯುವ ದಸರಾ, ಅರಮನೆ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್‌ ಕುಮಾರ್‌, ಮೈಸೂರು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌, ಮೈಸೂರು ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸೀಫ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ್‌, ಡಿಸಿಪಿ ಬಿಂದುಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!