Mysore
35
few clouds

Social Media

ಬುಧವಾರ, 22 ಏಪ್ರಿಲ 2026
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಆ.30ರವರೆಗೂ ಮಳೆ ಸಾಧ್ಯತೆ

yellow rain alert

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಆಗಸ್ಟ್.‌30ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್.‌30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.‌28ರವರೆಗೂ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ರಾಮನಗರ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags:
error: Content is protected !!