ಮಂಡ್ಯ: ಗಣಪತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ನಡೆದಿದೆ.
ಯರಹಳ್ಳಿ ಗ್ರಾಮದ ಪ್ರದೀಪ್ (28) ಎಂಬಾತನೇ ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ತಡರಾತ್ರಿ ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡುವ ವೇಳೆ, ಯುವಕರ ಜೊತೆ ನೀರಿಗಿಳಿದಿದ್ದ ಪ್ರದೀಪ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಇನ್ನು ಪ್ರದೀಪ್ ಮದ್ಯಪಾನ ಮಾಡಿ ನೀರಿಗಿಳಿದಿದ್ದ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಪ್ರದೀಪ್ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





