Mysore
18
clear sky

Social Media

ಗುರುವಾರ, 22 ಜನವರಿ 2026
Light
Dark

ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿ ಬಂಧನ

theft

ಮಡಿಕೇರಿ : ಮೊಬೈಲ್ ಅಂಗಡಿಯ ರೋಲಿಂಗ್ ಶೆಟ್ರಸ್ ಮುರಿದು ೩೨ ಹೊಸ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಸ್ಸಾಂ ರಾಜ್ಯ ಮೂಲದ ಚಿಕ್ಕಮಗಳೂರು ಜಿಲ್ಲೆ ತೇಗೂರು ಗಾದ ನಿವಾಸಿಯಾದ ಜೋಹುರ್ ಆಲಿ(೨೮) ಬಂಧಿತ ಆರೋಪಿ. ಕಳೆದ ಸೆ.೨೪ರಂದು ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲಿರುವ ಫಲೀಲ್ ಎಂಬವರಿಗೆ ಸೇರಿದ ಮೊಬೈಲ್ ಅಂಗಡಿಯ ರೋಲಿಂಗ್ ಶೆಟ್ರಸ್ ಮುರಿದು ವಿವಿಧ ಕಂಪನಿಯ ಅಂದಾಜು ೩೨ ಹೊಸ ಮೊಬೈಲ್ ಫೋನ್‌ಗಳು ಮತ್ತು ೩೦೦೦ ನಗದು ರೂ. ಕಳವು ಮಾಡಿರುವ ಕುರಿತು ದೂರು ಸ್ವೀಕರಿಸಲಾಗಿತ್ತು. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಪತ್ತೆಗೆ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ತನಿಖೆ ನಡೆಸಿದ ತಂಡ ಮಾಹಿತಿ ಸಂಗ್ರಹಿಸಿ ಗುರುವಾರ ಚಿಕ್ಕಮಗಳೂರು ಜಿಲ್ಲೆ ತೇಗೂರು ಗ್ರಾಮದ ನಿವಾಸಿ ಜೋಹುರ್ ಆಲಿ ಎಂಬಾತನನ್ನು ಬಂಧಿಸಿ ೩೨ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿರಾಜಪೇಟೆ ಉಪವಿಭಾಗ ಡಿಎಸ್‌ಪಿ ಮಹೇಶ್‌ಕುಮಾರ್, ಗೋಣಿಕೊಪ್ಪ ಸಿಪಿಐ ಶಿವರಾಜ ಆರ್ ಮುಧೋಳ್, ಪಿಎಸ್‌ಐ ಪ್ರದೀಪ್ ಕುಮಾರ್.ಬಿ.ಕೆ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Tags:
error: Content is protected !!