Mysore
28
clear sky

Social Media

ಗುರುವಾರ, 22 ಜನವರಿ 2026
Light
Dark

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು

accident

ಮಂಡ್ಯ : ದ್ವಿಚಕ್ರ ವಾಹನಕ್ಕೆ ಸಾರಿಗೆ ಬಸ್ ಡಿಕ್ಕಿಯಾಗಿ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಂಚೆಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಂಚೆಬೀರನಹಳ್ಳಿ ಬಳಿ ಈ ಘಟನೆ ನಡೆದಿದೆ. ಕಡೆಹೆಮ್ಮಿಗೆ ಗ್ರಾಮದ ಉಮೇಶ್ (24) ಹಾಗೂ ಚನ್ನರಾಯಪಟ್ಟಣದ ದಿನೇಶ್ ಮೃತ ಪಟ್ಟ ಯುವಕರು.

ಮೃತ ಇಬ್ಬರೂ ದ್ವಿಚಕ್ರ ವಾಹನದಲ್ಲಿ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದರು. ಈ ವೇಳೆ ಮೈಸೂರು ಕಡೆಯಿಂದ ಬಂದ ಕೆ.ಎಸ್.ಆರ್.ಟಿ.ಸಿ ಸಾರಿಗೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಚಾಲಕನ ಅಜಾಗರೂಕ ಚಾಲನೆಯೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

Tags:
error: Content is protected !!