Mysore
21
clear sky

Social Media

ಗುರುವಾರ, 26 ಫೆಬ್ರವರಿ 2026
Light
Dark

ಬಾನು ಮುಷ್ತಾಕ್ ಬಗೆಗಿನ ಹೇಳಿಕೆಯಿಂದ ಯು ಟರ್ನ್ ಒಡೆದ ಸಂಸದ ಯದುವೀರ್‌

yaduveer (1)

ಮೈಸೂರು : ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ಹೇಳಿಕೆಗೆ ಮೊದಲು ಸ್ಪಷ್ಟನೆ ಕೊಡಲಿ. ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ನನ್ನ ವಿರೋಧ ಇದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಯು ಟರ್ನ್‌ ಒಡೆದಿದ್ದಾರೆ.

ಮೈಸೂರಿನ ಸುತ್ತೂರು ಮಠದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಅವರನ್ನ ಆಯ್ಕೆ ಮಾಡಿದಾಗ ನಾನು ಸ್ವಾಗತಿಸಿದ್ದೆ. ಅವರ ಹಳೇ ಭಾಷಣ ನಂತರ ನೋಡಿದ್ದೇನೆ.ಆ ಭಾಷಣಕ್ಕೆ ಸ್ಪಷ್ಟೀಕರಣ ಬೇಕು. ಸ್ಪಷ್ಟೀಕರಣ ಕೊಡಲಿ ಅಥವಾ ಹೇಳಿಕೆಯನ್ನ ವಾಪಸ್ ಪಡೆಯಲಿ. ಎರಡು ಮಾಡದಿದ್ದರೆ ನನ್ನ ವಿರೋಧ ಇದೆ.

ಪಾರ್ಟಿಯ ನಿರ್ಧಾರವೇ ನಮ್ಮ ನಿರ್ಧಾರ. ಪಾರ್ಟಿಗೆ ವಿರುದ್ಧ ನಿಲುವು ನನ್ನದಲ್ಲ ಎಂದಿದ್ದಾರೆ. ಭುವನೇಶ್ವರಿ ಕುರಿತ ಬಾನು ಮುಷ್ತಾಕ್ ಹೇಳಿಕೆಯಿಂದ ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. ಅದನ್ನ ಮುಷ್ತಾಕ್ ಅರ್ಥ ಮಾಡಿಕೊಳ್ಳಬೇಕು. ಅವರ ಧರ್ಮರ ಆಚರಣೆ ಬಗ್ಗೆ ನಾನು ಮಾತನಾಡುವುದಿಲ್ಲ. ನಮ್ಮ ಧರ್ಮದಲ್ಲಂತು ಮೂರ್ತಿ ಪೂಜೆ ಶ್ರೇಷ್ಠ. ಅವರು ಚಾಮುಂಡಿ ಮಾತೇ ಗೌರವಿಸಿ ಬರಬೇಕು. ಭಕ್ತಿಯಿಂದ ದೇವರನ್ನ ಪೂಜಿಸಬೇಕು. ಇದಕ್ಕು ಮೊದಲು ತಮ್ಮ ಹೇಳೆಯ ಹೇಳಿಕೆಗೆ ಸ್ಪಷ್ಟೀಕರಣ ಕೊಡಬೇಕು ಎಂದಿದ್ದಾರೆ.

Tags:
error: Content is protected !!