ಬೆಂಗಳೂರು: ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಇಂದಿನಿಂದ ಸೆಪ್ಟೆಂಬರ್.5ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸೆ.2 ಮತ್ತು ಸೆ.3ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಈ ತಿಂಗಳು ಕೂಡ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಈಗಾಗಲೇ ದೇಶಾದ್ಯಂತ ಮಳೆ ಭಾರೀ ಅವಾಂತರ ಸೃಷ್ಟಿಸಿದೆ.





