Mysore
19
broken clouds

Social Media

ಬುಧವಾರ, 18 ಮಾರ್ಚ್ 2026
Light
Dark

ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮಂಗಳೂರು: ಹೋರಾಟಗಾರ ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.

ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ರಾಜೇಂದ್ರ ದಾಸ್‌ ಎಂಬುವವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಬಿಎನ್‌ಎಸ್‌ ಕಾಯ್ದೆ 296ರಂತೆ ಪ್ರಕರಣ ದಾಖಲಾಗಿದೆ.

ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಹೇಳಿ ವ್ಯಕ್ತಿಯೊಬ್ಬರನ್ನು ತೋರಿಸಿದ ವಿಚಾರದಲ್ಲಿ ಈಗಾಗಲೇ ಮಟ್ಟಣ್ಣವರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಕೇಸ್‌ ದಾಖಲಾಗಿದೆ.

Tags:
error: Content is protected !!