ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ನಟಿ ರನ್ಯಾರಾವ್‌ಗೆ ಬಿಗ್ ಶಾಕ್ ಎದುರಾಗಿದ್ದು, 102.55 ಕೋಟಿ ರೂ ದಂಡ ಪಾವತಿಸುವಂತೆ ಡಿಆರ್‌ಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ನಟಿ ರನ್ಯಾರಾವ್ ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಣೆ ಮಾಡಿರುವುದು ದೃಢವಾಗಿದ್ದು, ಇಂದು ಜೈಲಿಗೆ ತೆರಳಿ ನೋಟಿಸ್ ನೀಡಲಿರುವ ಅಧಿಕಾರಿಗಳು ದಂಡ ಪಾವತಿ ಮಾಡದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ
ಅದೇ ರೀತಿ ಪ್ರಕರಣದ ಎ2 ಆರೋಪಿ ತರುಣ್ ಕೊಂಡೂರು ರಾಜುಗೆ 62 ಕೋಟಿ ರೂ ದಂಡ ವಿಧಿಸಲಾಗಿದೆ. ಅದೇ ರೀತಿ ಪ್ರಕರಣದ ಇನ್ನುಳಿದ ಆರೋಪಿಗಳಾದ ಭರತ್ ಜೈನ್, ಸಾಹಿಲ್ ಜೈನ್‌ಗೂ ದಂಡ ಪಾವತಿಸುವಂತೆ ನೋಟಿಸ್ ನೀಡಲಾಗಿದೆ.
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಸ್ಯಾಂಡಲ್‌ವುಡ್ ನಟಿ ರನ್ಯಾರಾವ್ ಅವರನ್ನು ಪೊಲೀಸರು ಬಂಧಿಸಿದ್ದರು. ದುಬೈನಿಂದ ಅಕ್ರಮ ಚಿನ್ನ ಸಾಗಾಟ ಮಾಡಿ ಕೆಂಪೇಗೌಡ ಅಂತರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದರು.





