ಮೈಸೂರು: ಧರ್ಮಸ್ಥಳ ಪ್ರಕರಣ ಮೈಸೂರು ಭಾಗದ ಭಕ್ತರ ಭಾವನೆಗೆ ಚ್ಯುತಿ ತಂದಿದೆ ಎಂದು ಶಾಸಕ ತನ್ವೀರ್ ಸೇಠ್ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಅನೇಕರು ಅವರ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆ ಮಾಡಿ ಸತ್ಯ ಹೊರ ತರುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಆದರೆ ಎಸ್‌ಐಟಿ ಸ್ವಾಗತ ಮಾಡಿದವರು ತನಿಖೆಗೆ ಮುಕ್ತ ಅವಕಾಶ ನೀಡದೆ ಮಧ್ಯ ಪ್ರವೇಶ ಮಾಡಿ ಜನರ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಭಕ್ತರ ಭಾವನೆಯಂತೆ ಮಂಜುನಾಥನ ದರ್ಶನಕ್ಕೆ ಹೊರಟಿದ್ದಾರೆ. ಇದಕ್ಕೆ ಕಾಂಗ್ರೆಸ್ ಎನ್ನಬೇಡಿ, ಜನರ ಯಾತ್ರೆ.. ಪಕ್ಷದ ವತಿಯಿಂದ ಇಲ್ಲಿ ಯಾತ್ರೆ ಕೈಗೊಂಡಿಲ್ಲ ಎಂದರು.
ಇದನ್ನು ಓದಿ: ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ
ಇನ್ನು ಮೊದಲು ಮುಸುಕುಧಾರಿಗೆ ಮಂಪರು ಪರೀಕ್ಷೆ ಆಗಬೇಕು. ಕನಿಷ್ಟ ಎಸ್‌ಐಟಿ ಮಧ್ಯಂತರ ವರದಿಯಾದರೂ ಹೊರ ಬರಬೇಕು. ಗೊಂದಲಗಳುಗೆ ತೆರೆ ಎಳೆಯಬೇಕು ಎಂದು ಗೃಹಸಚಿವರಿಗೆ ಕೇಳಿದ್ದೇನೆ ಎಂದು ಹೇಳಿದರು.
ಇನ್ನು ಷಡ್ಯಂತ್ರಕ್ಕೆ ವಿದೇಶಿ ಹಣ ಹರಿದು ಬಂದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದಕ್ಕೆ ನಾನು ಉತ್ತರ ಕೊಡಲ್ಲ. ಯಾವುದೇ ವಿದೇಶಿ ಹಣ ಬರಬೇಕು ಅಂದರೆ ಕೇಂದ್ರದ ಮೂಲಕವೇ ಬರಬೇಕು. ತನಿಖೆ ವೇಳೆ ಇದೂ ಕೂಡ ತನಿಖೆ ಆಗಲಿ. ವಿರೋಧ ಪಕ್ಷದವರು ಬಟ್ಟೆ ಬದಲಿಸಿದಂತೆ ಹೆಳಿಕೆ ನೀಡಿದರೆ ಮಾಡಲು ಸಾಧ್ಯ ಇಲ್ಲ.
ಮೊದಲು ಎಸ್‌ಐಟಿ ತನಿಖೆ ವರದಿ ಬರಲಿ. ಮುಂದೆ ನೋಡೋಣ. ಮುಸುಕುದಾರಿ ಹಿನ್ನೆಲೆಯ ಬಗ್ಗೆ ತನಿಖೆ ಆಗಬೇಕು. ಆತ ಹೇಳಿರುವ ಹೆಸರುಗಳ ಬಗ್ಗೆ ಕೂಡ ತನಿಖೆ ಆಗಬೇಕು.
ಇದು ಯಾವುದೇ ರಾಜಕೀಯ ಯಾತ್ರೆಯಲ್ಲ, ಭಕ್ತರ ಯಾತ್ರೆಯಾಗಿದೆ ಎಂದು ಧರ್ಮಸ್ಥಳ ಯಾತ್ರೆ ಬಗ್ಗೆ ಮಾಹಿತಿ ನೀಡಿದರು.




