ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎರಡನೇ ಆರೋಪಿ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತ ಆದೇಶವನ್ನ 64ನೇ ಸಿಸಿಹೆಚ್ ನ್ಯಾಯಾಲಯ ಸೆಪ್ಟೆಂಬರ್ 9ಕ್ಕೆ ಕಾಯ್ದಿರಿಸಿದೆ.
ಬುಧವಾರ ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಆದೇಶವನ್ನ ಸೆಪ್ಟಂಬರ್ 9ಕ್ಕೆ ಕಾಯ್ದಿರಿಸಿದೆ.
ಇದನ್ನು ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ದಿನ ಕಳೆಯಲು ಪುಸ್ತಕಗಳ ಮೊರೆ ಹೋದ ದರ್ಶನ್
ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ ದರ್ಶನ್ ಸೇರಿದಂತೆ ಎಲ್ಲರೂ ಅರ್ಜಿ ಸಲ್ಲಿಸಿದ್ದರು. ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡದಂತೆ ದರ್ಶನ್ ಪರ ವಕೀಲ ಸುನೀಲ್ ವಾದಿಸಿದರು.
ನಟ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನಂತರ ಸುಪ್ರೀಂಕೋರ್ಟ್ 7 ಆರೋಪಿಗಳ ಜಾಮೀನು ರದ್ದು ಮಾಡಿತ್ತು.





