ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆಪ್ಟಂಬರ್ 22 ರಿಂದ ಅಕ್ಟೋಬರ್ 2ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದೀಗ ಜಿಲ್ಲಾಡಳಿತ ದಸರಾ ಟಿಕೆಟ್, ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು, ನಾಡಹಬ್ಬ ಮೈಸೂರು ದಸರಾ ಪ್ರಮುಖ ಆಕರ್ಷಣೆಯಾದ ಜಂಬೂವಾರಿ, ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಟಿಕೆಟ್ ಹಾಗೂ ಗೋಲ್ಡ್ ಕಾರ್ಡುಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಟಿಕೆಟ್ ಮತ್ತು ಗೋಲ್ಡ್ ಕಾರ್ಡುಗಳನ್ನು ಮಾರಾಟಕ್ಕೆ ಬಿಡುಗಡೆಗೊಳಿಸಲಾಗಿರುತ್ತದೆ.
ಸಾರ್ವಜನಿಕರಿಗೆ ದಸರಾ ಗೋರ್ಡ್ ಕಾರ್ಡ್ ಮತ್ತು ಟಿಕೆಟ್‌ಗಳು ದಿನಾಂಕ: 06.09.2025ರ ಅಪರಾಹ್ನ 3-00 ಗಂಟೆಯಿಂದ ನಾಡಹಬ್ಬ ಮೈಸೂರು ದಸರಾ ಅಧಿಕೃತ ಜಾಲತಾಣ https://mysoredasara.gov.in/ರಲ್ಲಿ ಖರೀದಿಗೆ ಲಭ್ಯವಿರುತ್ತದೆ. ಸಾರ್ವಜನಿಕರು ಆನ್ ಲೈನ್ ಮೂಲಕ ಖರೀದಿಸಬಹುದಾಗಿರುತ್ತದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.





