Mysore
18
few clouds

Social Media

ಬುಧವಾರ, 28 ಜನವರಿ 2026
Light
Dark

ಕಲ್ಲು ತೂರಾಟ ಪ್ರಕರಣ: ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌ಗೆ ಕರೆ

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣವನ್ನು ಖಂಡಿಸಿ ನಾಳೆ ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಿದ್ದಾರೆ.

ಜೊತೆಗೆ ಬುಧವಾರ ಮದ್ದೂರು ತಾಲ್ಲೂಕಿನ ಎಲ್ಲಾ ಗಣೇಶ ಮೂರ್ತಿಗಳನ್ನು ಮದ್ದೂರು ಪಟ್ಟಣಕ್ಕೆ ತಂದು ಮೆರವಣಿಗೆ ಮಾಡಿ ವಿಸರ್ಜನೆ ಮಾಡಲು ತೀರ್ಮಾನಿಸಲಾಗಿದೆ. ಡಿಜೆ ಸಮೇತ ಸಾಮೂಹಿಕ ಗಣೇಶ ವಿಸರ್ಜನೆ ನಡೆಸಲು ಕರೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಕಲ್ಲು ತೂರಾಟದ ಬಳಿಕ ಮದ್ದೂರಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿರುವುದು ಪೂರ್ವ ನಿಯೋಜಿತ ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಮದ್ದೂರಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಲೇ ಇದೆ. ಮಂಡ್ಯ, ಮೈಸೂರು, ಬೆಂಗಳೂರು, ಹಾಸನ, ರಾಮನಗರ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

Tags:
error: Content is protected !!