ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರವೇ ಗತಿಯಾಗಿದ್ದು, ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ನಿರಾಕರಿಸಿದೆ.
ಈ ಕುರಿತು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದ್ದು, ಸದ್ಯಕ್ಕೆ ಬಳ್ಳಾರಿಗೆ ವರ್ಗಾಯಿಸಲು ಸಕಾರಣಗಳಿಲ್ಲ. ಆದರೆ ನಟ ದರ್ಶನ್ ಜೈಲಿನೊಳಗೆ ಓಡಾಡಬಹುದು ಎಂದು ಕೋರ್ಟ್ ಹೇಳಿದೆ.
ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡುವಂತೆ ಕೋರಿ ನಟ ದರ್ಶನ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನಿರಾಕರಣೆ ಮಾಡಿದೆ.
ಜೈಲು ಕೈಪಿಡಿಯಂತೆ ಜೈಲಿನೊಳಗೆ ವಾಕ್ ಮಾಡಬಹದು ಎಂದು ಹೇಳಿದ್ದು, ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡಲು ಅನುಮತಿ ನೀಡಿದೆ.
ಈ ಮೂಲಕ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದ್ದು, ದರ್ಶನ್ ಮಾನಸಿಕವಾಗಿ ತೀವ್ರ ಕುಗ್ಗಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





